ಕೆ.ಎಸ್.ಆರ್.ಟಿ.ಸಿ ಬಸ್ಸುಗಳಿಗೆ ಡಿ.ಎಂ ನೋಟಿಫಿಕೇಶನ್ನಿಂದ ವಿನಾಯಿತಿ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆ.ಎಸ್.ಆರ್.ಟಿ.ಸಿ) ಎಲ್ಲಾ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ದಿನಾಂಕ 5-1-1991 ಹಾಗೂ ದಿನಾಂಕ 6-4-1993 ರ ಅಧಿಸೂಚನೆಯಿಂದ ವಿನಾಯಿತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಮಂಗಳೂರು ನಗರದಲ್ಲಿರುವ ಜನರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಉಪಯೋಗ ಪಡೆದುಕೊಳ್ಳಲು, ಸಾರ್ವಜನಿಕ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲ ಮತ್ತು ಸುರಕ್ಷತೆ ದೃಷ್ಟಿಯಿಂದ ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸಾರ್ವಜನಿಕ ಸಮೂಹ ಸಾರಿಗೆ ಉತ್ತೇಜಿಸಲು ಮತ್ತು ವೈಯಕ್ತಿಕ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ಕೆ.ಎಸ್.ಆರ್.ಟಿ.ಸಿಯ ಎಲ್ಲಾ ವಾಹನಗಳಿಗೆ ಈ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
