ಕೇಂದ್ರದಿಂದ 10 ವರ್ಷದಲ್ಲಿ ರಾಜ್ಯಕ್ಕೆ ‘ಚೊಂಬು’ – ಸುಧೀರ್ ಕುಮಾರ್ ಮುರೊಳ್ಳಿ

Spread the love

ಕೇಂದ್ರದಿಂದ 10 ವರ್ಷದಲ್ಲಿ ರಾಜ್ಯಕ್ಕೆ ‘ಚೊಂಬು’ – ಸುಧೀರ್ ಕುಮಾರ್ ಮುರೊಳ್ಳಿ

ಚಿಕ್ಕಮಗಳೂರು: ಕೇಂದ್ರದಲ್ಲಿ ಕಳೆದ 10 ವರ್ಷದಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ, ಕರ್ನಾಟಕ ರಾಜ್ಯಕ್ಕೆ ಬರೀ ಕೇವಲ ಚೊಂಬು ನೀಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷ ಸುಧೀರ್ ಕುಮಾರ್ ಮರೋಳ್ಳಿ ಲೇವಡಿ ಮಾಡಿದರು.

ಅವರು ತಾಲೂಕಿನ ಬಿ ಎಚ್ ಕೈಮರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಿಂದಿನ ಸಂಸದರ ರೀತಿ ಕೆಲಸ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಹಿಂದಿನ ಸಂಸದರಾದ ಶೋಭಾ ಕರಂದ್ಲಾಜೆ ಜನರ ಸಂಕಷ್ಠದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಗ್ರಾಮಕ್ಕೆ ಭೇಟಿಯೂ ನೀಡಿಲ್ಲ. ಬಿಜೆಪಿ ಅವರೇ ಗೋ ಬ್ಯಾಕ್ ಶೋಭಾ ಅಭಿಯಾನ ಆರಂಭಿಸಿ ಅವರನ್ನು ಕ್ಷೇತ್ರ ಬಿಟ್ಟು ಹೋಗುವಂತೆ ಮಾಡಿದ್ದಾರೆ ಹಾಗಾಗಿ ಹಿಂದಿನ ಸಂಸದರ ರೀತಿ ಕೆಲಸ ಮಾಡುವ ಅಭ್ಯರ್ಥಿ ನಮಗೆ ಬೇಕಾಗಿಲ್ಲ

ಎನ್ ಆರ್ ಪುರ ತಾಲೂಕಿನಲ್ಲಿ ಹುಲಿಯೋಜನೆ, ಬಫರ್ ಝೋನ್, 4-1 ಅಧಿಸೂಚನೆ ಜಾರಿಯಾಗಿ ಸಾಕಷ್ಟು ಜನರಿಗೆ ಹಕ್ಕುಪತ್ರ ದೊರೆಯದಿರಲು ಮಾಜಿ ಶಾಸಕರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಕಾನೂನುಗಳೇ ಕಾರಣ ಎಂದು ಆರೋಪಿಸಿದರು. ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಆದರೆ ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿತಪ್ಪಿಲ್ಲ ಬದುಕು ರೂಪಿಸಿಕೊಂಡಿದ್ದಾರೆ. ಕ್ಷೇತ್ರದ ಜಿಲ್ಲೆಯ ಸಮಸ್ಯೆ ಬಗೆಹರಿಯಲು ಉತ್ತಮ ಸಂಸದೀಯಪಟುವಾಗಿರುವ ಕೆ ಜಯಪ್ರಕಾಶ್ ಹೆಗ್ಡೆಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಟಿ ಡಿ ರಾಜೇಗೌಡ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆ ಈಡೇರಿಸಿಲ್ಲ ರೈತರ ಆದಾಯ ದ್ವಿಗುಣಗೊಳಿಸಿಲ್ಲ 2 ಕೋಟಿ ಉದ್ಯೋಗ ಸೃಷ್ಟಿಸಿಲ್ಲ ಎಂದು ಟೀಕಿಸಿದರು. ದೇಶದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಶ್ರೆಯಸ್ಸು ಕಾಂಗ್ರೆಸ್ ಗೆ ಸಲ್ಲುತ್ತದೆ. ಕಾಂಗ್ರೆಸ್ ಜನರ ಬದುಕು ರೂಪಿಸುವ ವಿಚಾರದ ಮೇಲೆ ಚುನಾವಣೆ ಎದುರಿಸಿದರೆ ಬಿಜೆಪಿ ಭಾವನೆ ಕೆರಳಿಸುವ ಮೂಲಕ ಚುನಾವಣೆ ಎದುರಿಸುತ್ತದೆ. ಕ್ಷೇತ್ರದಲ್ಲಿ 15 ವರ್ಷ ಶಾಸಕರಾಗಿದ್ದವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಂದಾಯ ಭೂಮಿಯನ್ನು ಅರಣ್ಯ ಎಂದು ಮಾಡಿ ಹಲವು ಗ್ರಾಮಗಳ ಜನರ ಬದುಕು ಬೀದಿಗೆ ಬರುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಸಮಸ್ಯೆ ಪರಿಹಾರಕ್ಕೆ ಜಯಪ್ರಕಾಶ್ ಹೆಗ್ಡೆ ಆಯ್ಕೆ ಅನಿವಾರ್ಯ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಪಿ ಅಂಶುಮಂತ್ ಮಾತನಾಡಿ ಕಾಂಗ್ರೆಸ್ ಜನರ ಬದುಕು ರೂಪಿಸುವ ಕಾರ್ಯಕ್ರಮ ಜಾರಿಗೆ ತಂದರೆ ಅದನ್ನು ಸಹಿಸಿಕೊಳ್ಳಲಾರದೆ ಬಿಜೆಪಿ ಅವರು ಅಪಪ್ರಚಾರ ಮಾಡುತ್ತಿದ್ದಾರೆ 70 ವರ್ಷಗಳಲ್ಲಿ ಕಾಂಗ್ರೆಸ್ ಬೆಳೆಸಿದ ಸಾರ್ವಜನಿಕ ವಲಯದ ಉದ್ಯಮಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡಿ ಖಾಸಗೀಕರಣ ಮಾಡಿದೆ ಎಂದರು ಆರೋಪಿಸಿದರು.


Spread the love