ಕೇಂದ್ರದ ನಿರ್ಲಕ್ಷ ಧೋರಣೆ : ಸೆ.12 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಧರಣಿ ಸತ್ಯಾಗ್ರಹ

ಕೇಂದ್ರದ ನಿರ್ಲಕ್ಷ ಧೋರಣೆ : ಸೆ.12 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಧರಣಿ ಸತ್ಯಾಗ್ರಹ

ಉಡುಪಿ: ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ 22 ಜಿಲ್ಲೆಗಳಲ್ಲಿ ಅತಿವೃಷ್ಠಿಯಾದರೂ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡಿಗಾಸೂ ಪರಿಹಾರ ಬಿಡುಗಡೆ ಮಾಡಿಲ್ಲ. ರಾಜ್ಯದ ಬಗ್ಗೆ ಕೇಂದ್ರದ ಈ ನಿರ್ಲಕ್ಷ ಧೋರಣೆ ಖಂಡಿಸಿ ಹಾಗೂ ಕೇಂದ್ರದ ಜನ ವಿರೋಧಿ ನೀತಿಯಾದ ಮೋಟಾರು ವಾಹನ ಕಾಯಿದೆಯ ತಿದ್ದುಪಡಿ ವಿರುದ್ದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ತಾ. 12.09.2019ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜೋಡುಕಟ್ಟೆಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.