ಕೇಂದ್ರದ ಬಜೆಟ್ ಸಂಪೂರ್ಣ ನಿರಾಶಾದಾಯಕ ; ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ

Spread the love

ಕೇಂದ್ರದ ಬಜೆಟ್ ಸಂಪೂರ್ಣ ನಿರಾಶಾದಾಯಕ ; ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಉಡುಪಿ ಜಿಲ್ಲಾ ಜನತಾ ದಳ ಜಾತ್ಯಾತೀತ ಘಟಕದ ಅಧ್ಯಕ್ಷ ಯೋಗೀಶ್ ವಿ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟಿನಲ್ಲಿ ರೈತರ ಸಾಲಮನ್ನದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಮಧ್ಯಮ ವರ್ಗ, ರೈತರು ಹಾಗೂ ಬಡವರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದೇ ಆದಲ್ಲಿ ನಾಲ್ಕುವರೆ ವರ್ಷದ ಹಿಂದೆಯೇ ಈ ಬಜೆಟ್ ಅನ್ನು ಮಂಡಿಸಬೇಕಿತ್ತು . ಇದು ಬಜೆಟ್ ಅಲ್ಲ , 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಾಗಿದೆ. ಇದು ಕೇವಲ ಚುನಾವಣೆಯ ಗಿಮಿಕ್ ಆಗಿದ್ದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ ಎಂದು ಅವರು ಹೇಳಿದ್ದಾರೆ.


Spread the love