ಕೇಂದ್ರ ಸಚಿವೆಯಾಗಿ ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕಾರ

Spread the love

ಕೇಂದ್ರ ಸಚಿವೆಯಾಗಿ ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ  ಕೇಂದ್ರ ರಾಜ್ಯ ಮಂತ್ರಿಯಾಗಿ  ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ಪ್ರಮಾಣ ವಚನ ಸ್ವೀಕರಿಸಿದರು.

ಸಚಿವ ಸಂಪುಟದ ಪುನರ್ ರಚನೆಯಲ್ಲಿ ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.


Spread the love