ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದ ಬಿ ವೈ ರಾಘವೇಂದ್ರ

Spread the love

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದ ಬಿ ವೈ ರಾಘವೇಂದ್ರ

ಕುಂದಾಪುರ: ದೆಹಲಿಯಲ್ಲಿನ ಕೇಂದ್ರ ಸರ್ಕಾರದ ದೂರಸಂಪರ್ಕ ಹಾಗೂ ರೈಲ್ವೆ ಮಂತ್ರಾಲಯದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಬುಧವಾರ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ಜಿಲ್ಲೆಯ 80 ಹಾಗೂ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ಜನವಸತಿ ಪ್ರದೇಶಗಳಲ್ಲಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.

ಕೇಂದ್ರ ಸಚಿವರೊಂದಿಗೆ ಸಮಸ್ಯೆಯ ಮನವರಿಕೆ ಮಾಡಿದ ಸಂಸದರು, ಜನವಸತಿ ಪ್ರದೇಶಗಳಲ್ಲಿ ನೆಟವರ್ಕ್ ದೊರಕದೆ ಇರುವುದರಿಂದ ವಿದ್ಯಾರ್ಥಿಗಳು, ಮನೆಯಲ್ಲಿಯೇ ಕೆಲಸ ಮಾಡುವವರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಪ್ರಮುಖ ಸಂವಹನ ಮಾಧ್ಯಮವಾಗಿರುವ ದೂರವಾಣಿ ನೆಟವರ್ಕ್ ನಿಂದಾಗಿ ತುರ್ತು ಸಮಯದಲ್ಲಿ ಸಂಪರ್ಕ ಮಾಡಲು ಸಾಧ್ಯವಾಗದ ಸ್ಥಿತಿ ಈ ಭಾಗಗಳಲ್ಲಿ ಇರುವುದರಿಂದ ನೆಟ್ವವರ್ಕ್ ಸಂಪರ್ಕ ಸುಧಾರಣೆ ಮಾಡಲು ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಹಾಗೂ ದಾದರ್ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆಯೂ ಸಂಸದ ರಾಘವೇಂದ್ರ ಇದೆ ಸಂದರ್ಭದಲ್ಲಿ ಸಚಿವರಿಗೆ ಮನವಿ ಮಾಡಿದರು.


Spread the love

Leave a Reply

Please enter your comment!
Please enter your name here