ಕೇರಳದ ವಿಶೇಷ ಕುಜಿಮಂತಿ ಬಿರಿಯಾನಿ ತಿಂದ ಕಾಸರಗೋಡಿನ ಯುವತಿ ಸಾವು

Spread the love

ಕೇರಳದ ವಿಶೇಷ ಕುಜಿಮಂತಿ ಬಿರಿಯಾನಿ ತಿಂದ ಕಾಸರಗೋಡಿನ ಯುವತಿ ಸಾವು

ಕಾಸರಗೋಡು: ಫುಡ್​ ಪಾಯಿಸನ್​ನಿಂದ ಕೇರಳದ ಕಾಸರಗೋಡಿನಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಕಾಸರಗೋಡಿನ ಥಲಕ್ಲೇ ಮೂಲದ ಅಂಜುಶ್ರೀ ಪಾರ್ವತಿ ಎಂದು ಗುರುತಿಸಲಾಗಿದೆ. ಉದುಮದಲ್ಲಿರುವ ಹೋಟೆಲ್​ ಒಂದರಲ್ಲಿ ಆನ್​ಲೈನ್​ ಮೂಲಕ ಚಿಕನ್​ ಆಹಾರ ತರಿಸಿ ಅಂಜುಶ್ರೀ ಸೇವಿಸಿದ್ದಳು. ಇದಾದ ಬಳಿಕ ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಪರಿಸ್ಥಿತಿ ಗಂಭೀರವಾದ ಬೆನ್ನಲ್ಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಯುವತಿ ಮೃತಪಟ್ಟಿದ್ದಾಳೆ. ಪುಡ್​ ಪಾಯಿಸನ್​ನಿಂದ ಮೃತಪಟ್ಟಿದ್ದಾಳೆ   ಎಂದು ವೈದ್ಯರು ದೃಢಪಡಿಸಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದ ಅಂಜುಶ್ರೀ ಕ್ರಿಸ್ ಮಸ್ ರಜೆಯ ಕಾರಣ ಸಮಯ ಕಳೆಯಲೆಂದು ಮನೆಗೆ ಬಂದಿದ್ದರು. ಈ ವೇಳೆ ಕಾಸರಗೋಡಿನ ಹೋಟೆಲ್ ಒಂದರಿಂದ ಆನ್ ಲೈನ್ ಮೂಲಕ ಕುಜಿಮಂತಿ ಹೆಸರಿನ ಚಿಕನ್ ಬಿರಿಯಾನಿ ಖರೀದಿಸಿ ಸೇವಿಸಿದ್ದರು. ತಕ್ಷಣ ಆಕೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಸಮೀಪದ ಕಾಸರಗೋಡು ಆಸ್ಪತ್ರೆಗೂ ಬಳಿಕ ಮಂಗಳೂರು ಆಸ್ಪತ್ರೆಗೂ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಕೆ ಕೊನೆಯುಸಿರೆಳೆದಳು.

ಉದುಮದಲ್ಲಿರುವ ರೊಮ್ಯಾನ್ಸಿಯಾ ಹೋಟೆಲ್‌ನಿಂದ ಆಹಾರ ಪದಾರ್ಥ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ಅಂಜು ಜೊತೆಗೆ ಊಟ ಮಾಡಿದ ಸ್ನೇಹಿತರಿಗೂ ಫುಡ್ ಪಾಯಿಸನ್​ ಆಗಿದ್ದು, ಅವರು ಕೂಡ ಅಸ್ವಸ್ಥರಾಗಿದ್ದಾರೆ ಎಂದು ಉದುಮ ಶಾಸಕ ಸಿ.ಎಚ್.ಕುಂಜಂಬು ಮಾಹಿತಿ ನೀಡಿದ್ದಾರೆ. ಅಂಜುಶ್ರೀ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದು, ಕಾಸರಗೋಡು ಮತ್ತು ಕಣ್ಣೂರಿನ ಅಧಿಕಾರಿಗಳು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಸಾವಿಗೆ ಕಾರಣ ‘ಕುಜಿಮಂತಿ’ಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ಸಂಬಂಧಪಟ್ಟ ಹೋಟೆಲ್‌ನಲ್ಲಿರುವ ನೀರು ಮತ್ತು ಆಹಾರವನ್ನು ಪರಿಶೀಲಿಸಲಾಯಿತು. ಈ ಘಟನೆ ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿದೆ. ದಿ.ಕುಮಾರನ್ ನಾಯರ್ – ಅಂಬಿಕಾ ದಂಪತಿಯ ಪುತ್ರಿಯಾದ ಅಂಜುಶ್ರೀ ಅವರು ತಾಯಿ ಅಲ್ಲದೆ ಸಹೋದರರನ್ನು ಅಗಲಿದ್ದಾರೆ. ಕಳೆದ ಒಂದು ವಾರದಲ್ಲಿ ಇದು ಎರಡನೇ ಫುಡ್​ ಪಾಯಿಸನ್​ ಸಾವಾಗಿದೆ. ಕೊಟ್ಟಾಯಂ ಮೂಲದ ರಶ್ಮಿ ಅವರು ‘ಅಲ್ಫಾಹಮ್’ ಸೇವಿಸಿ ಸೋಮವಾರ ಮೃತಪಟ್ಟಿದ್ದರು. ಅಲ್ಲದೆ ಕೆಲ ತಿಂಗಳಿನ ಹಿಂದೆ ಕಾಸರಗೋಡಿನಲ್ಲಿ ದೇವಾನಂದ ಎಂಬ ಬಾಲಕಿ ಶವರ್ಮಾ ತಿಂದು ಸಾವನ್ನಪ್ಪಿದ್ದಳು.


Spread the love

Leave a Reply

Please enter your comment!
Please enter your name here