ಕೇರಳ: ಚಲಿಸುತ್ತಿದ್ದ ಕಾರಿಗೆ ಬೆಂಕಿ. ಗರ್ಭಿಣಿ ಮಹಿಳೆ ಸೇರಿ ದಂಪತಿ ಸಜೀವ ದಹನ

Spread the love

ಕೇರಳ: ಚಲಿಸುತ್ತಿದ್ದ ಕಾರಿಗೆ ಬೆಂಕಿ. ಗರ್ಭಿಣಿ ಮಹಿಳೆ ಸೇರಿ ದಂಪತಿ ಸಜೀವ ದಹನ

ಕೇರಳ: ಕೇರಳದ ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಗರ್ಭಿಣಿ ಮಹಿಳೆ ಸೇರಿ ದಂಪತಿಗಳು ಸಜೀವ ದಹನಗೊಂಡ ಘಟನೆ ಗುರುವಾರ ನಡೆದಿದೆ.

ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಏಕಾಏಕಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ.

ಎದುರು ಸೀಟಿನಲ್ಲಿ ಕುಳಿತ್ತಿದ್ದ ಮಹಿಳೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಗಂಡ ಬಾಗಿಲು ತೆರೆಯಲಾಗದೆ ಸಜೀವ ದಹನಗೊಂಡಿದ್ದಾರೆ.

ಈ ವೇಳೆ ಅಕ್ಕಪಕ್ಕದ ಜನರು ಸ್ಥಳಕ್ಕೆ ಬಂದು ರಕ್ಷಣೆಗೆ ಮುಂದಾದರೂ ಬೆಂಕಿಯ ಜ್ವಾಲೆ ಇಡೀ ಕಾರನ್ನೇ ಆವರಿಸಿದ ಪರಿಣಾಮ ನಿಸ್ಸಹಾಯಕರಾಗಿದ್ದರು ಎನ್ನಲಾಗಿದೆ.

ಸದ್ಯ ಕಾರಿನಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಯಾವುದೇ ಪ್ರಾಣಾಪಾಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Spread the love