ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

Spread the love

ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

ಮಂಗಳೂರು: ನಗರದ ಕೊಟ್ಟಾರ ಚೌಕಿ ಬಳಿ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿಗೊಳಗಾಗಿದ್ದ ಆಕಾಶಭವನ ನಿವಾಸಿ ಬಶೀರ್ (47) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಸಾವನಪ್ಪಿದ್ದಾರೆ.

ಜನವರಿ 3 ರಂದು ರಾತ್ರಿ ಕೊಟ್ಟಾರ ಚೌಕಿ ಬಳಿಯಲ್ಲಿರುವ ತನ್ನ ಫಾಸ್ಟ್ ಫುಡ್ ಹೋಟೆಲಿನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ತಲವಾರು ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬಶೀರ್ ಅವರನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಶೀರ್ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಕೊನೆಯುಸಿರೆಳಿದ್ದಾರೆ ಎಂದು ತಿಳಿದು ಬಂದಿದೆ.

ಕಾಟಿಪಳ್ಳದಲ್ಲಿ ಜನವರಿ 3 ರಂದು ಮಧ್ಯಾಹ್ನ ದೀಪಕ್ ರಾವ್ ಹತ್ಯೆ ನಡೆದ ದಿನ ರಾತ್ರಿ ಬಶೀರ್ ಅವರ ಮೇಲೂ ಮಾರಣಾಂತಿಕ ಧಾಳಿ ನಡೆದಿತ್ತು. ಇದಕ್ಕೆ ಸಂಬಂಧೀಸಿ ನಾಲ್ವರು ಆರೋಪಿಗಳನ್ನು ಈಗಾಗಲೇ ಪೋಲಿಸರು ಬಂಧೀಸಿದ್ದಾರೆ.


Spread the love