ಕೊಡಗಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

Spread the love

ಕೊಡಗಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಮಡಿಕೇರಿ: ಕೊಡಗಿನಲ್ಲಿ ಕಳೆದ ನಾಲ್ಕೆöÊದು ದಿನಗಳಿಂದ ಧಾರಾಕಾವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಹಾಮಳೆಗೆ ನದಿ, ತೊರೆ, ಹಳ್ಳಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಮಳೆಗಾಳಿಗೆ ಮರಗಳು ಮುರಿದು ಬಿದ್ದಿದ್ದು, ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ವಾಹಕಗಳು ನೆಲಕ್ಕುರುಳಿವೆ.

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 73.81 ಮಿ.ಮೀ. ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗಿನ ಈ ಬಾರಿ 1184.24 ಮಿ.ಮೀ ಮಳೆ ಸುರಿದಿದೆ.

ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು ಸದ್ಯ 14091 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಸದ್ಯ 2,859 ಅಡಿಗಳ ಜಲಾಶಯದಲ್ಲಿ ಇದೀಗ 2853.69 ಅಡಿಯಷ್ಟು ನೀರಿದ್ದು, ಮುಂಜಾಗ್ರತಾ ಕ್ರಮವಾಗಿ ಸದ್ಯ 3,400 ಕ್ಯುಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಮಳೆ ಧಾರಾಕಾರವಾಗಿ ಸುರಿಯುತ್ತಿರುವ ಕಾರಣ ಬೆಟ್ಟಗುಡ್ಡ, ಕಾಡು ಮೇಡು, ಕಾಫಿ ತೋಟಗಳ ನಡುವೆ ಹುದುಗಿರುವ ಜಲಾಶಯಗಳಿಗೆ ಜೀವ ಕಳೆ ಬಂದಿದ್ದು ಭೋರ್ಗರೆದು ಧುಮುಕುತ್ತಿವೆ. ಇನ್ನೊಂದೆಡೆ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಯನ್ನು ದಾಟಲು ಮುಂದಾದ ವೃದ್ಧ ಅವಂದೂರು ಗ್ರಾಮದ ನಿವಾಸಿ ಬೊಮ್ಮೇಗೌಡನ ಬಾಬಿ(70) ಎಂಬುವರು ಬುಧವಾರ ಕೊಚ್ಚಿ ಹೋಗಿದ್ದರು. ಅವರ ಶವವನ್ನು ಗುರುವಾರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ. ಇದು ಮಳೆಗಾಲದ ಮೊದಲ ಬಲಿಯಾಗಿದೆ.


Spread the love