ಕೊಡವೂರು ಶಂಕರನಾರಾಯಣ ದೇವಸ್ಥಾನ ರಾಶಿ ಪೂಜೆ – ಸಂಭ್ರಮದ ಹಸಿರು ಹೊರೆ ಕಾಣಿಕೆ ಮೆರವಣಿಗೆ

Spread the love

ಕೊಡವೂರು ಶಂಕರನಾರಾಯಣ ದೇವಸ್ಥಾನ ರಾಶಿ ಪೂಜೆ – ಸಂಭ್ರಮದ ಹಸಿರು ಹೊರೆ ಕಾಣಿಕೆ ಮೆರವಣಿಗೆ

ಉಡುಪಿ: ಕೊಡವೂರು ಮಹತೋಬಾರ ಶಂಕರನಾರಾಯಣ ದೇವಸ್ಥಾನಲ್ಲಿ ನಡೆಯಲಿರುವ ರಾಶಿ ಪೂಜಾ ಮಹೋತ್ಸವದ ಅಂಗವಾಗಿ ಸೋಮವಾರ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಹೊರೆ ಕಾಣಿಕೆ ಮೆರವಣಿಗೆಗೆ ದಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅವರು ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕೀಲು ಕುದುರೆ, ಕುಣಿತ ಭಜನೆ, ಕುಣಿತ ಚಂಡೆ, ನಾಸಿಕ್ ಬ್ಯಾಂಡ್, ವಿವಿಧ ವೇಷ ಭೂಷಣ ಕಲಶ ಹಿಡಿದ ಮಹಿಳೆಯರು ಕಲಾ ಪ್ರಕಾರಗಳು ಮೆರವಣಿಗೆಗೆ ಮೆರುಗನ್ನು ನೀಡಿತು.

ಈ ವೇಳೆ ರಾಶಿ ಪೂಜಾ ಉತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಗೌರವಾಧ್ಯಕ್ಷ ಆನಂದ ಪಿ. ಸುವರ್ಣ, ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಜನಾರ್ದನ ಕೊಡವೂರು, ಕೃಷ್ಣಮೂರ್ತಿ ಭಟ್, ಭಾಸ್ಕರ ಪಾಲನ್ ಬಾಚನಬೈಲು, ಸುಧಾ ಎನ್ ಶೆಟ್ಟಿ, ರಾಜ ಎ ಸೇರಿಗಾರ, ಚಂದ್ರಕಾಂತ್ ಪುತ್ರನ್, ನಗರಸಭಾ ಸದಸ್ಯ ವಿಜಯ ಕೊಡವೂರು, ಭಕ್ತವಂದದ ಅಧ್ಯಕ್ಷ ರವಿರಾಜ್ ಹೆಗ್ಡೆ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಾವತಿ ಎಸ್ ಸಾಲ್ಯಾನ್, ರಾಶಿ ಪೂಜಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


Spread the love