ಕೊಣಾಜೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಇಬ್ಬರ ಬಂಧನ

Spread the love

ಕೊಣಾಜೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಇಬ್ಬರ ಬಂಧನ

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ರವಿವಾರ ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ.

ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ದಾಳಿ ಸಂದರ್ಭ ತೋಮಸ್ ಮತ್ತು ಮಣಿಕುಟ್ಟನ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ ಸುಮಾರು 1,15,110-00 ಮೌಲ್ಯ ದ ಅಕ್ರಮ ಮದ್ಯ ತಯಾರಿಕೆ ಯ ಮೂರು ಮೆಷಿನ್ ಗಳು, ಮಿಕ್ಸರ್ ಮೆಷಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 ಮನ್ಶನ್ ಹೌಝ್ ಎಂಬ ಹೆಸರಿನ ಮದ್ಯದ ಬಾಟ್ಲಿಗಳು , ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love