ಕೊನೆಗೂ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ, ತನಿಖೆ ನಡೆಸುವಂತೆ ಸಿಎಂಗೆ ಪತ್ರ

Spread the love

ಕೊನೆಗೂ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ, ತನಿಖೆ ನಡೆಸುವಂತೆ ಸಿಎಂಗೆ ಪತ್ರ

ಬೆಳಗಾವಿ: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಸತೀಶ್ ಜಾರಕಿಹೊಳಿ  ಅವರ ಹೇಳಿಕೆ ರಾಜ್ಯ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಇದನ್ನು ಕಾಂಗ್ರೆಸ್ ಹೈಕಮಾಂಡ್​ ಸಹ ಗಂಭೀರವಾಗಿ ಪರಿಗಣಿಸಿ ವಾರ್ನಿಂಗ್ ಕೊಟ್ಟಿದೆ. ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡಿಸುವಂತೆ ಸಿಎಂಗೆ ಪತ್ರ ಬರೆದಿದ್ದಾರೆ.

‘ತನಿಖಾ ಸಮಿತಿ ರಚಿಸುವ ಕುರಿತು’ ಎನ್ನುವ ವಿಷಯದ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂಗೆ ಪತ್ರ ಬರೆದಿದ್ದು,  ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


Spread the love

Leave a Reply

Please enter your comment!
Please enter your name here