ಕೊರೋನಾ ಕುರಿತ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ.ಜಗದೀಶ್

ಕೊರೋನಾ ಕುರಿತ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರೀಕರ ಸಂಚಾರ ನಿರ್ಭಂದಿಸಿ ಸಿ.ಅರ್.ಪಿ.ಸಿ ಸೆಕ್ಷನ್ 144(3) ರಲ್ಲಿ ಆದೇಶ ಹೊರಡಿಸಿದೆ ಅಲ್ಲದೇ ಇತರೇ ನಿರ್ದೇಶನಗಳನ್ನು ಹೊರಡಿಸಲಾಗಿದೆ.

ಆದರೆ ಜಿಲ್ಲೆಯ ನಾಗರೀಕರು ಈ ಆದೇಶಗಳನ್ನು ಉಲ್ಲಂಘನೆ ಮಾಡುತ್ತಿರುವುದು ವರದಿಯಾಗುತ್ತಿದ್ದು, ಇಂತಹ ಪ್ರಕರಣಗಳನ್ನು ನಿಯಂತ್ರ್ರಿಸುವ ಅವಶ್ಯಕತೆಯಿರುವುದರಿಂದ, ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆಯಿದ್ದು, ಸಿ.ಆರ್.ಪಿ.ಸಿ ಆದೇಶ ಮತ್ತು ಕೋವಿಡ್ ರೋಗವನ್ನು ನಿಯಂತ್ರಿಸಲು ಹೊರಡಿಸಲಾಗಿರುವ ಇತರೇ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ, ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಅಧಿಕಾರವನ್ನು , ಕುಂದಾಪುರ ಉಪವಿಭಾಗಾಧಿಕಾರಿಗಳು, ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ , ಕಾರ್ಕಳ, ಬೈಂದೂರು, ಹೆಬ್ರಿ ತಹಸೀಲ್ದಾರ್ ಗಳಿಗೆ ಪ್ರತ್ಯಾಯೋಜಿಸಿ , ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

Leave a Reply

  Subscribe  
Notify of