ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು : ಯಶ್‍ಪಾಲ್ ಸುವರ್ಣ

Spread the love

ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು : ಯಶ್‍ಪಾಲ್ ಸುವರ್ಣ

ಉಡುಪಿ : ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕಾಪು ಪತ್ರಕರ್ತರ ಸಂಘದ 75 ಸದಸ್ಯರಿಗೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಮ್ಮ ವೈಯುಕ್ತಿಕ ನೆಲೆಯಲ್ಲಿ ಪಡಿತರ ಕಿಟ್‍ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್‍ಪಾಲ್ ಸುವರ್ಣ ಕೊರೋನಾ ಲಾಕ್‍ಡೌನ್ ಸಂಕಷ್ಟದ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿ ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು.
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ  ರಾಜೇಶ್ ಶೆಟ್ಟಿ ಹಾಗೂ ಕಾಪು ಪತ್ರಕರ್ತರ ಸಂಘದ ಅಧ್ಯಕ್ಷರಾದ  ರಾಕೇಶ್ ಕುಂಜೂರು ರವರಿಗೆ ಪಡಿತರ ಕಿಟ್‍ಗಳನ್ನು ಹಸ್ತಾಂತರಿಸಲಾಯಿತು.
ಸಮಾರಂಭದಲ್ಲಿ  ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ  ಜಯಕರ ಶೆಟ್ಟಿ ಇಂದ್ರಾಳಿ, ಅಜ್ಜರಕಾಡು ವಾರ್ಡಿನ ನಗರಸಭಾ ಸದಸ್ಯರಾದ  ರಶ್ಮಿ ಸಿ. ಭಟ್, ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ನಜೀರ್ ಪೊಲ್ಯ, ಉಮೇಶ್ ಮಾರ್ಪಳ್ಳಿ, ಜನಾರ್ಧನ ಕೊಡವೂರು, ಜಯಕರ ಸುವರ್ಣ, ದೀಪಕ್ ಜೈನ್, ನಟರಾಜ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.


Spread the love