ಕೊರೋನಾ ಮಧ್ಯೆ ಯುಗಾದಿ,  ಶಬ್ ಎ ಬರತ್, ಗುಡ್ ಫ್ರೈಡೆ ಹಬ್ಬಗಳು ;ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Spread the love

ಕೊರೋನಾ ಮಧ್ಯೆ ಯುಗಾದಿ,  ಶಬ್ ಎ ಬರತ್, ಗುಡ್ ಫ್ರೈಡೆ ಹಬ್ಬಗಳು ;ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಅಬ್ಬರ ಶುರುವಾಗಿದೆ. ಇನ್ನು ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು ಈ ಹಿನ್ನಲೆಯಲ್ಲಿ ಮುಂಬರುವ ಹಬ್ಬ, ಹರಿದಿನಗಳ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೆ ಹಬ್ಬಗಳು ಬರುತ್ತಿರುವುದರಿಂದ ಗುಂಪುಗೂಡದಂತೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಆಚರಣೆಯನ್ನು ನಿಷೇಧಿಸಿದೆ. ಆದೇಶವನ್ನು ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.

ಹಬ್ಬ ಆಚರಣೆ ಸಲುವಾಗಿ ಗುಂಪು ಸೇರುವಿಕೆಗೆ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೆ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆ(ಎಸ್‌‌ಡಿಎಂಎ) ಅಡಿ ಕೇಸ್‌ ದಾಖಲಾಗಿಸಲಾಗುವುದು ಎಚ್ಚರಿಕೆ ನೀಡಲಾಗಿದೆ.

ಬಿಬಿಎಂಪಿ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿ ಪರಿಸ್ಥಿತಿ ನಿಭಾಯಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.


Spread the love