ಕೊರೋನ ಲಾಕ್ ಡೌನ್ ಉತ್ತಮ ಕಾರ್ಯನಿರ್ವಹಣೆ – ‘ವಾರಿಯರ್ ಆಫ್ ದಿ ಡೇ’ ಆಗಿ ಪುನೀತ್ ಆಯ್ಕೆ

Spread the love

ಕೊರೋನ ಲಾಕ್ ಡೌನ್ ಉತ್ತಮ ಕಾರ್ಯನಿರ್ವಹಣೆ – ‘ವಾರಿಯರ್ ಆಫ್ ದಿ ಡೇ’ ಆಗಿ ಪುನೀತ್ ಆಯ್ಕೆ

ಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಹ್ಯಾಮಿಲ್ಟನ್ ವೃತ್ತದಲ್ಲಿ ಸಂಚಾರ ನಿಯಂತ್ರಣದಲ್ಲಿ ತೋರಿದ ಕರ್ತವ್ಯಕ್ಕಾಗಿ ಮಂಗಳೂರು ಪಶ್ಚಿಮ ಟ್ರಾಫಿಕ್ ಕಾನ್‌ಸ್ಟೆಬಲ್ ಪುನೀತ್ ಅವರನ್ನು ‘ವಾರಿಯರ್ ಆಫ್ ದಿ ಡೇ’ ಎಂದು ಗುರುತಿಸಲಾಗಿದೆ. ಆ ಮೂಲಕ ಪುನೀತ್ ಪ್ರಥಮ ‘ವಾರಿಯರ್ ಆಫ್ ದಿ ಡೇ’ ಆಗಿ ಗುರುತಿಸಲ್ಪಟ್ಟಿದ್ದಾರೆ.

ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ ಕೊವಿಡ್ ವಾರಿಯರ್’ ಎಂದು ಗೌರವಿಸಲಿದ್ದಾರೆ.

ಅದರಂತೆ ಸೋಮವಾರ ಪುನೀತ್ ಪ್ರಥಮ ‘ವಾರಿಯರ್ ಆಫ್ ದಿ ಡೇ’ ಆಗಿ ಗುರುತಿಸಲ್ಪಟ್ಟಿದ್ದಾರೆ.

ಪೊಲೀಸರ ಕರ್ತವ್ಯವನ್ನು ಮೆಚ್ಚಿ ಅವರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


Spread the love