ಕೊಲ್ಲೂರು ದೇವಳಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

Spread the love

ಕೊಲ್ಲೂರು ದೇವಳಕ್ಕೆ ಭೇಟಿ ನೀಡಿದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶುಕ್ರವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉಡುಪಿಯಿಂದ ಕೊಲ್ಲೂರು ದೇವಳಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯ ಪ್ರದಕ್ಷಿಣೆ ಪ್ರದಕ್ಷಿಣೆ ಮಾಡಿದ ರಾಜ್ಯಪಾಲರು ದೇವರ ಚಿನ್ನದ ರಥ ವೀಕ್ಷಿಸಿದರು.

ಈ ಸಂದರ್ಬದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ,ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ , ಎಎಸ್ಪಿ ಕುಮಾರ ಚಂದ್ರ , ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು


Spread the love