ಕೊಲ್ಲೂರು ದೇವಳಕ್ಕೆ ಸಚಿವ ಕೋಟ ಭೇಟಿ – ಪೂಜೆ ಸಲ್ಲಿಕೆ

Spread the love

ಕೊಲ್ಲೂರು ದೇವಳಕ್ಕೆ ಸಚಿವ ಕೋಟ ಭೇಟಿ – ಪೂಜೆ ಸಲ್ಲಿಕೆ

ಕುಂದಾಪುರ : ರಾಜ್ಯದ ನೂತನ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿ ನಿಯೋಜಿತರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭಾನುವಾರ ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಅರ್ಚಕರ ಮೂಲಕ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಸಚಿವ ಕೊಟ ಶ್ರೀನಿವಾಸ ಪೂಜಾರಿಯವರನ್ನು ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಅವರು ಸಚಿವ ಕೋಟ ಹಾಗೂ ಅವರ ಪತ್ನಿ ಶಾಂತಾ ಶ್ರೀನಿವಾಸ ಪೂಜಾರಿ ಅವರನ್ನು ದೇಗುಲದ ವತಿಯಿಂದ ಗೌರವಿಸಿದರು. ಸಚಿವರ ಪುತ್ರಿ ಶ್ರುತಿ ಇದ್ದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ.ಮಹೇಶ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ವ್ತವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ, ಬೆಳ್ವೆ ಗಣೇಶ್‌ ಕಿಣಿ, ಕೆ.ಪಿ.ಶೇಖರ, ಸಂಧ್ಯಾ ರಮೇಶ್‌, ರತ್ನಾ ಆರ್‌ ಕುಂದರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಬಿಜೆಪಿ ಪಕ್ಷದ ಪ್ರಮುಖರಾದ ಸದಾನಂದ ಉಪ್ಪಿನಕುದ್ರು, ಮಹೇಂದ್ರ ಪೂಜಾರಿ , ಪ್ರವೀಣಕುಮಾರ ಶೆಟ್ಟಿ, ಸಾಮ್ರಾಟ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಕರಣ್ ಪೂಜಾರಿ, ಮಹೇಶ್ ಪೂಜಾರಿ ಕೋಡಿ, ಸುರೇಂದ್ರ ಖಾರ್ವಿ ಗಂಗೊಳ್ಳಿ, ಸದಾಶಿವ ಪಡುವರಿ, ಪ್ರಕಾಶ ಪೂಜಾರಿ ಜಡ್ಡು, ರಾಘವೇಂದ್ರ ನೆಂಪು, ಮಿಥುನ್ ದೇವಾಡಿಗ ತ್ರಾಸಿ, ಸಂದೀಪ್‌ ಕೊಲ್ಲೂರು ಇದ್ದರು.


Spread the love