ಕೊಲ್ಲೂರು ದೇವಸ್ಥಾನದಲ್ಲಿ ನ.24 ರಂದು ಸಂಜೆ ದರ್ಶನಕ್ಕೆ ನಿರ್ಬಂಧ

Spread the love

ಕೊಲ್ಲೂರು ದೇವಸ್ಥಾನದಲ್ಲಿ ನ.24 ರಂದು ಸಂಜೆ ದರ್ಶನಕ್ಕೆ ನಿರ್ಬಂಧ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಕ್ಟೋಬರ್ 24 ರ ಮಹಾನವಮಿಯಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಭಂಧಿಸಲಾಗಿದೆ

ಜಿಲ್ಲೆಯ ಬೈಂದೂರು ತಾಲೂಕು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಕ್ಟೋಬರ್ 25 ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅಕ್ಟೋಬರ್ 24 ರ ಮಹಾನವಮಿಯಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಭಂಧಿಸಲಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love