ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ!

Spread the love

ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ!

ಕೊಲ್ಲೂರು: ಕುಂದಾಪುರ: ಸಿಗಂಧೂರಿನಿಂದ ಕೊಲ್ಲೂರಿಗೆ ನಲವತ್ತಕ್ಕೂ ಅಧಿಕ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದು ಕೊಲ್ಲೂರು ಬಳಿಯಲ್ಲಿನ ದಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಹಲವರು ಗಾಯಗೊಂಡ ಘಟನೆ ಜ.11ರ ಸಂಜೆ ನಡೆದಿದೆ.

ಅಪಘಾತದಿಂದ 22 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. 22 ಮಂದಿಯ ಪೈಕಿ ಸಂಕ್ರಪ್ಪ (50), ರೂಪಾ (35), ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಸ್ಥಳಾಂತರಿಸಲಾಗಿದೆ.

ಗಾಯಾಳುಗಳು ಕೋಲಾರದ ಮುಳುಬಾಗಿಲು ಮೂಲದವರೆಂದು ತಿಳಿದುಬಂದಿದೆ.ಕೊಲ್ಲೂರು ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಪಲ್ಟಿಯಾದ ಬಸ್ ನ್ನು ಕ್ರೇನ್ ಮೂಲಕ ಮೇಲಕ್ಕೆತ್ತಿದ್ದಾರೆ.

ಕೊಲ್ಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love