ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ

Spread the love

ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಗೋವಾದಿಂದ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ಬಂಧಿತರನ್ನು ಗೋವಾರ ಕಾಂಡೋಲಿಮ್ ನಿವಾಸಿ ಅಜ್ಮಲ್ ಪುಲಿಕ್ಕಲ್ ಮೊಹಮ್ಮದ್ (44) ಎಂದು ಗುರುತಿಸಲಾಗಿದೆ. ಪ್ರಸ್ತುತ ಕಾಸರಗೋಡು ಕುಂಜತ್ತೂರು ಗ್ರೀನ್ ಹೌಸ್ ಎಂಬಲ್ಲಿ ವಾಸವಾಗಿದ್ದಾರೆ.

ಈ ಹಿಂದೆ ಆಗೋಸ್ತ್ ತಿಂಗಳಲ್ಲಿ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಕೋಕೆನ್ ನ್ನು ಹೊಂದಿದ 5 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ರೂ. 70,000/- ಮೌಲ್ಯದ ಮಾದಕ ವಸ್ತುವಾದ ಕೋಕೆನ್ ಮೂರು ಕಾರು, ನಗದು ಹಣ ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿನ ಆರೋಪಿಗಳಿಗೆ ಗೋವಾದಿಂದ ಮಾದಕ ವಸ್ತುವಾದ ಕೋಕೆನ್ ನ್ನು ಪೂರೈಕೆ ಮಾಡಿದ ವ್ಯಕ್ತಿಯು ತಲೆಮರೆಸಿಕೊಂಡಿದ್ದನು. ಈ ಆರೋಪಿಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ಮಂಗಳೂರು ಪೂರ್ವ ಠಾಣೆ ಯ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದು, ಈತನು ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದನು. ಈತನ ವಿರುದ್ಧ ಈ ಹಿಂದೆ ನಕಲಿ ಪಾಸ್ ಪೋರ್ಟ್ ಹೊಂದಿದ ಬಗ್ಗೆ 2008 ನೇ ಇಸವಿಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಹಾಗೂ ಸಿಬ್ಬಂದಿಗಳು ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಮತ್ತು ಸಿಬ್ಬಂದಿಗಳು ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love