ಕೋಟೆಕಾರಿನಲ್ಲಿ ವೃದ್ಧ ದಂಪತಿ ನೇಣು ಬಿಗಿದು ಆತ್ಮಹತ್ಯೆ

Spread the love

ಕೋಟೆಕಾರಿನಲ್ಲಿ ವೃದ್ಧ ದಂಪತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ವೃದ್ಧ ದಂಪತಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಬೀರಿಯಲ್ಲಿ ನಡೆದಿದೆ.

ಮೃತರನ್ನು ಆಕಾಶವಾಣಿ ನಿವೃತ್ತ ಉದ್ಯೋಗಿ ದೇವರಾಜ್ ಗಾಣಿಗ (74) ಮತ್ತು ಅವರ ಪತ್ನಿ ವಸಂತಿ (64) ಎಂದು ಗುರುತಿಸಲಾಗಿದೆ.

ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ದಂಪತಿ ಜೀವನದಲ್ಲಿ ಜಿಗುಪ್ಸೆಗೊಂಡು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love