ಕೋಟೆಕಾರು ಸಹಕಾರಿ ಸಂಘದಲ್ಲಿ ದರೋಡೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

Spread the love

ಕೋಟೆಕಾರು ಸಹಕಾರಿ ಸಂಘದಲ್ಲಿ ದರೋಡೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಉಳ್ಳಾಲ: ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 2025ರ ಜನವರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಬಂಧಿತ ಆರೋಪಿ. ಈತ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ತಂಡವು ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ತಲೆಮರೆಸಿಕೊಂಡಿದ್ದ ಸೂರತ್ ನಿವಾಸಿ ಆರೋಪಿ ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಯಾನೆ ಮನೋಜ್ ಜೀತ್ ಲಾಲ್ ವರ್ಮ ಯಾನೆ ಧರ್ಮ್ ಯಾನೆ ಮಾಸ್ಟರ್ ಯಾನೆ ಕಳ್ಳು, (34) ಎಂಬಾತನನ್ನು ಮೇ 11ರಂದು ಮಹಾರಾಷ್ಟ್ರ ರಾಜ್ಯದ ಮುಂಬೈಯ ಪನ್ವೇಲಿ ರೈಲ್ವೆ ಸ್ಟೇಷನ್ ಬಳಿ ವಶಕ್ಕೆ ಪಡೆದಿತ್ತು. ಆತನನ್ನು ಮೇ 12 ರಂದು ಉಳ್ಳಾಲ ಪೊಲಿಸ್ ಠಾಣೆಗೆ ಕರೆದು ಕಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ಈ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಿ ಮೇ 22 ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


Spread the love
Subscribe
Notify of

0 Comments