ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮದಿಂದ ಜರುಗಿದ ಕೊಡಿಹಬ್ಬ

Spread the love

ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮದಿಂದ ಜರುಗಿದ ಕೊಡಿಹಬ್ಬ

ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದ ರಥೋತ್ಸವ (ಕೊಡಿಹಬ್ಬ) ಶುಕ್ರವಾರ ಸಂಭ್ರಮದಿಂದ ಜರಗಿತು.

ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಐತಾಳ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ನಡೆದವು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಗಣೇಶ ಗೌಡ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.

ಗಣಪತಿ ಪೂಜೆ, ಮಹಾಪೂಜೆಯ ಅನಂತರ ರಥಾರೋಹಣ ಮತ್ತು ಸಂಜೆ ರಥಾವರೋಹಣ ನಡೆಯಿತು. 25 ಸಾವಿರಕ್ಕೂ ಮಿಕ್ಕಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್.ಪಿ. ಮಾರ್ಗದರ್ಶನದಲ್ಲಿ ಬಿಗು ಕುಮಾರಚಂದ್ರ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


Spread the love