ಕೋಟ : ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

Spread the love

ಕೋಟ : ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

ಉಡುಪಿ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ(ಅಸಾಂಸ್ಥಿಕ) ಕಪಿಲಾ, 17ವರ್ಷ 9 ತಿಂಗಳು ಪ್ರಾಯದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ವಿಚಾರಿಸಿದರು.

ಸಂತ್ರಸ್ತೆಯ ಸಂಬಂಧಿಯಾಗಿರುವ 27ವರ್ಷದ ಯುವಕ, ಆಕೆಯನ್ನು ಮದುವೆ ಆಗುವುದಾಗಿ ನಂಬಿಸಿ ದೈಹಿಕ ಹಿಂಸೆ ನೀಡಿದ್ದಾನೆಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ವಿರುದ್ಧ ಕಾನೂನು ಪರಿವೀಕ್ಷಣಾಧಿಕಾರಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಅದರಂತೆ ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ ಮಾರ್ಗ ದರ್ಶನದಲ್ಲಿ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಕೋಟ ಪೊಲೀಸ್ ಠಾಣೆ ಸಹಾಯಕ ಉಪ ನಿರೀಕ್ಷಕಿ ಮುಕ್ತಾ, ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಹಾಗೂ ಸ್ಥಳೀಯರಿಗೆ ಪೋಕ್ಸೋ ಮತ್ತು ಬಾಲ್ಯ ವಿವಾಹ ಪದ್ಧತಿ ಬಗ್ಗೆ ಅರಿವು ಮೂಡಿಸಿದರು.


Spread the love