ಕೋಟ| ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ : ಇಬ್ಬರ ಬಂಧನ

Spread the love

ಕೋಟ| ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ : ಇಬ್ಬರ ಬಂಧನ

ಕುಂದಾಪುರ: ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರುನ್ನು ಕೋಟ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತರನ್ನು ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ನಿವಾಸಿ ಶಿವರಾಜ್ (32), ಶಿರಿಯಾರ ನಿವಾಸಿ ಪ್ರದೀಪ್ (37) ಎಂದು ಗುರುತಿಸಲಾಗಿದೆ.

ಜೂನ್ 3 ರಂದು ರಾತ್ರಿ 10 ಗಂಟೆ ಹೊತ್ತಿಗೆ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಸಾಯಿಬ್ರ ಕಟ್ಟೆ ರಿಕ್ಷಾ ನಿಲ್ದಾಣದ ಸಮೀಪ ಮೊಬೈಲ್ ಫೋನ್ ಹಿಡಿದುಕೊಂಡು ಆರ್ ಸಿ ಬಿ ಮತ್ತು ಪಿಬಿಕೆಎಸ್ ಎಂದು ಹೇಳಿ ಕ್ರಿಕೆಟ್ ಬೆಟ್ಟಿಂಗ್ ವೆಬ್ ಸೈಟ್ ಮುಕಾಂತರ ಚಂದ್ರ ಜನ್ನಾಡಿ ಎಂಬ ಆರೋಪಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್ ಆನ್ ಲೈನ್ ಮೂಲಕ ಆಡುತ್ತಿದ್ದ ಇಬ್ಬರನ್ನು ಬಂಧಿಸಿದ್ದು, 3 ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 110/2025 ಕಲಂ: 112 BNS & 78 (i)(iii) KP Act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ


Spread the love
Subscribe
Notify of

0 Comments
Inline Feedbacks
View all comments