ಕೋಟ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗೆ ಕೊಲೆ ಬೆದರಿಕೆ – ಪ್ರಕರಣ ದಾಖಲು

Spread the love

ಕೋಟ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗೆ ಕೊಲೆ ಬೆದರಿಕೆ – ಪ್ರಕರಣ ದಾಖಲು

ಉಡುಪಿ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟ ಎಂಬವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿದ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ ಮೂಲದ ಅಜಿತ್ ಕುಮಾರ್ ಶೆಟ್ಟಿ ಎಂಬವರು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದು ಅಪರಿಚಿತ ವ್ಯಕ್ತಿಯೊರ್ವ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ಭರತ್ ದಾಸ್ ಎಂಬಾತ ಕರೆ ಮಾಡಲು ಸೂಚಿಸಿದ್ದು ಕೂಡಲೇ 10 ಲಕ್ಷ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕೋಟ ಪೊಲೀಸ್ ಠಾಣೆಗೆ ಅಜಿತ್ ಕುಮಾರ್ ಶೆಟ್ಟಿ ದೂರು ನೀಡಿದ್ದಾನೆ.

ಅಜಿತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love