
Spread the love
ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಕೈ ಜೋಡಿಸಲಿ: ಸಿದ್ದರಾಮಯ್ಯ
ಧಾರವಾಡ: ‘ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಪಕ್ಷವೇ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕಾದ ಅಗತ್ಯವಿದೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಕುಮಾರಸ್ವಾಮಿ ಅವರಿಗೆ ನಿಜವಾಗಲೂ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವ ಮನಸ್ಸಿದ್ದರೆ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿ’ ಎಂದರು.
‘ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು. ನಾವೀಗ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅವರನ್ನು ಗೆಲ್ಲಿಸಲು ಕುಮಾರಸ್ವಾಮಿ ಕೈಜೋಡಿಸಲಿ’ ಎಂದು ಸಿದ್ದರಾಮಯ್ಯ ಹೇಳಿದರು.
‘ಕೆಡಿಸುವ ಆಟ ಅಡುತ್ತಿರುವುದು ಜೆಡಿಎಸ್. ಕಾಂಗ್ರೆಸ್ ಅಧಿಕ ಸಂಖ್ಯೆಯಲ್ಲಿದ್ದಾಗಲೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಹೀಗಿರುವಾಗ ಕುಮಾರಸ್ವಾಮಿ ಅವರು ಕಾಂಗ್ರೆಸ್ ಕಡೆ ಬೆರಳು ತೋರಿಸುವುದು ಸರಿಯಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Spread the love