ಕ್ಯಾಂಟರ್ – ಖಾಸಗಿ ಬಸ್ ಡಿಕ್ಕಿ, ಚಾಲಕ ಸಜೀವ ದಹನ, ಪ್ರಯಾಣಿಕರು ಪಾರು

Spread the love

ಕ್ಯಾಂಟರ್ – ಖಾಸಗಿ ಬಸ್ ಡಿಕ್ಕಿ, ಚಾಲಕ ಸಜೀವ ದಹನ, ಪ್ರಯಾಣಿಕರು ಪಾರು

ಮಂಗಳೂರು : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಗೂಡ್ಸ್ ಲಾರಿ ಹಾಗೂ ಖಾಸಗಿ ಬಸ್ ಪರಸ್ಪರ ಡಿಕ್ಕಿಯಾಗಿ ಬಳಿಕ ಬೆಂಕಿ ಆವರಿಸಿಕೊಂಡು ಕಂಟೈನರ್ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಮೃತ ಚಾಲಕನನ್ನು ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕ ಮೈಸೂರಿನ ಸಂತೋಷ್ (25) ಎಂದು ಗುರುತಿಸಲಾಗಿದೆ.

ಕಡಬ ತಾಲೂಕಿನ ಕೌಕ್ರಾಡಿ ಮಣ್ಣಗುಂಡಿ ಎಂಬಲ್ಲಿ ಕ್ಯಾಂಟರ್ ಹಾಗೂ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದ್ದು ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ತಗುಲಿದೆ. ಘಟನೆಯಲ್ಲಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದ್ದು ಪ್ರಯಾಣಿಕರನ್ನು ಬೆಂಕಿ ತಗುಲಿದ ತಕ್ಷಣವೇ ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದು ಟ್ರಕ್ ಚಾಲಕ ಹೊರಕ್ಕೆ ಬರಲಾಗದೆ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿ ಕಾರ್ಯಾಚರಣೆ ಕೈಗೊಂಡರು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love