ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪ್ರಮುಖರ ಭೇಟಿ

Spread the love

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪ್ರಮುಖರ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು,   ಗುರುವಾರದಂದು ಇನೋಳಿ ಶ್ರೀ ಸೋಮನಾಥೇಶ್ವರ ದೇವಾಯಕ್ಕೆ ಭೇಟಿ ನೀಡುವ ಮೂಲಕ ಮಂಗಳೂರು ಮಂಡಲದ ಪ್ರವಾಸವನ್ನು ಪ್ರಾರಂಭಿಸಿದರು.

ನಂತರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗ್ರಾಮಚಾವಡಿ ಕೊಣಜೆಗೆ ಭೇಟಿ ನೀಡಿ ಗುರುಗಳಿಗೆ ನಮನ ಸಲ್ಲಿಸಿ, ಪಜೀರು ಶ್ರಿ ದುರ್ಗಾ ಕಾಳಿ ದೇವಸ್ಥಾನ, ಇರಾದ ಸೋಮನಾಥೇಶ್ವರ ದೇವಸ್ಥಾನ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದರೊಂದಿಗೆ, ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ನಂತರ ಕೊಲ್ಯದ ಬ್ರಹ್ಮಶ್ರೀ ನಾರಾಯಣಗುರು ಧ್ಯಾನಮಂದಿರಕ್ಕೆ ಭೇಟಿ ನೀಡಿದ ನಂತರ, ಶ್ರೀ ಶಾರದಾ ಸಭಾ ಸದನದಲ್ಲಿ ನೆರೆದ ಕಾರ್ಯಕರ್ತರನ್ನು ಉದ್ದೇಶಿಸಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಮಾತನಾಡಿದರು.

ಪ್ರವಾಸದ ಭಾಗವಾಗಿ ಮಂಗಳೂರು ಮಂಡಲದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎಂಟು ಮಹಾಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಪಕ್ಷದ ಜಿಲ್ಲಾ ಪ್ರಮುಖರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

Leave a Reply