ಕ್ರೈಸ್ತ ನಿಗಮ ಘೋಷಣೆ : ಭಾರತೀಯ ಕ್ರೈಸ್ತ ಒಕ್ಕೂಟ ಸ್ವಾಗತ

Spread the love

ಕ್ರೈಸ್ತ ನಿಗಮ ಘೋಷಣೆ : ಭಾರತೀಯ ಕ್ರೈಸ್ತ ಒಕ್ಕೂಟ ಸ್ವಾಗತ

ಉಡುಪಿ: ಸುಮಾರು ವರುಷಗಳ ಕ್ರೈಸ್ತರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ಕ್ರೈಸ್ತ ನಿಗಮ ಮಂಡಳಿಯನ್ನು ಘೋಷಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಭಾರತೀಯ ಕ್ರೈಸ್ತ ಒಕ್ಕೂಟದ ಪರವಾಗಿ ರಾಜ್ಯ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಅಭಿನಂದನೆ ಸಲ್ಲಿಸಿದ್ದಾರೆ.

ಕ್ರೈಸ್ತ ಅಭಿವೃಧಿ ಸಮಿತಿಯನ್ನು ಕ್ರೈಸ್ತ ಅಭಿವೃದ್ಧಿ ನಿಗಮ ಮಾಡಬೇಕೆಂದು ಬೇರೆ ಬೇರೆ ಸರಕಾರಗಳು ಬಂದಾಗ ಪ್ರತಿಯೊಬ್ಬರಿಗೂ ಮನವಿ ಮಾಡಿದ್ದು ಪ್ರಸ್ತುತ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ನುಡಿದಂತೆ ನಡೆದು ತಮ್ಮ ಪ್ರಥಮ ಬಜೆಟ್ ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ ಘೋಷಣೆ ಮಾಡಿರುವ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Spread the love