ಕ್ವಾರಂಟೈನ್ ಮುಗಿಸಿದ ಗರ್ಭಿಣಿ ಮಹಿಳೆಗೆ ಮನೆಗೆ ತೆರಳಲು ಅವಕಾಶ ನೀಡದ ಜಿಲ್ಲಾಡಳಿತದ ವಿರುದ್ದ ಬಿ ಎಸ್ ವೈಗೆ ಪ್ರಮೋದ್ ದೂರು

Spread the love

ಕ್ವಾರಂಟೈನ್ ಮುಗಿಸಿದ ಗರ್ಭಿಣಿ ಮಹಿಳೆಗೆ ಮನೆಗೆ ತೆರಳಲು ಅವಕಾಶ ನೀಡದ ಜಿಲ್ಲಾಡಳಿತದ ವಿರುದ್ದ ಬಿ ಎಸ್ ವೈಗೆ ಪ್ರಮೋದ್ ದೂರು

ಉಡುಪಿ: 15 ದಿನಗಳ ಕ್ವಾರಂಟೈನ್ ಅವಧಿ ಮುಗಿದರೂ ಗರ್ಭಿಣಿ ಮಹಿಳೆಯೋರ್ವರಿಗೆ ಮನೆಗೆ ಕಳುಹಿಸಿದ ಜಿಲ್ಲಡಾಳಿತದ ವಿರುದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಮೋದ್ ಮಧ್ವರಾಜ್ ದುಬೈನಿಂದ ಜಿಲ್ಲೆಗೆ ಆಗಮಿಸಿದ್ದ ಗರ್ಭಿಣಿ ಮಹಿಳೆಯೋರ್ವರು ತಮ್ಮ 15 ದಿನಗಳ ಹೋಟೆಲ್ ಕ್ವಾರಂಟೈನ್ ಮುಗಿಸಿದ್ದು, ಕ್ವಾರಂಟೈನ್ ಅವಧಿ ಮುಗಿದರೂ ಮನೆಗೆ ಕಳುಹಿಸಲು ಜಿಲ್ಲಾಡಳಿತ ಅವಕಾಶ ನೀಡುತ್ತಿಲ್ಲ ಅಲ್ಲದೆ ಮನೆಯ ಆಹಾರ ಕೂಡ ತರಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಬೇಜವಾಬ್ದಾರಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.


Spread the love