ಗಂಗೊಳ್ಳಿಯಲ್ಲಿ ಹೋಳಿ ಮೆರವಣಿಗೆ: ಮಾ. 26ರಂದು ಮದ್ಯ ಮಾರಾಟ ನಿಷೇಧ

Spread the love

ಗಂಗೊಳ್ಳಿಯಲ್ಲಿ ಹೋಳಿ ಮೆರವಣಿಗೆ: ಮಾ. 26ರಂದು ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಾರ್ಚ್ 26 ರಂದು ಕೊಂಕಣಿ ಖಾರ್ವಿ ಸಮಾಜದವರಿಂದ ಹೋಳಿ ಹಬ್ಬ ಆಚರಣೆ ವೇಳೆ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ, ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ, ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯಮಾರಾಟವನ್ನು ಮಾರ್ಚ್ 26 ರಂದು ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.


Spread the love

Leave a Reply