ಗಂಗೊಳ್ಳಿ : ಅರಾಟೆ ಸೇತುವೆ ಕೆಳಗಡೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Spread the love

ಗಂಗೊಳ್ಳಿ : ಅರಾಟೆ ಸೇತುವೆ ಕೆಳಗಡೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪುರ : ಆರಾಟೆ ಸೇತುವೆಯ ಕೆಳಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಟ್ ಬೆಲ್ತೂರು ನಿವಾಸಿ ನಾಗರಾಜ ಮೊಗವೀರ (35) ಎಂದು ಗುರುತಿಸಲಾಗಿದೆ.

ಶನಿವಾರ ಹೊಸಾಡು ಗ್ರಾಮದ ಅರಾಟೆ ಸೇತುವೆ ಕೆಳಗಡೆ ಹೊಳೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗ ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ ಸಿನ್ನೂರ ಸಂಗಣ್ಣ ಮತ್ತವರ ತಂಡ ದಾಳಿ ನಡೆಸಿ ಆರೋಪಿ ನಾಗರಾಜನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಅಂದಾಜು 16,500/-ರೂ ಮೌಲ್ಯದ ಒಟ್ಟು 541 ಗ್ರಾಂ 79 ಮಿಲಿ ಗ್ರಾಂ ತೂಕದ ಗಾಂಜಾ, ನಗದು 1,500/-ರೂ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love