ಗಂಗೊಳ್ಳಿ: ಎಲೆಕ್ಟ್ರಾನಿಕ್ ಶೋ ರೂಂನಲ್ಲಿ ಅಗ್ನಿ ಅವಘಡ

Spread the love

ಗಂಗೊಳ್ಳಿ: ಎಲೆಕ್ಟ್ರಾನಿಕ್ ಶೋ ರೂಂನಲ್ಲಿ ಅಗ್ನಿ ಅವಘಡ

ಕುಂದಾಪುರ: ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾದ ಘಟನೆ ಗಂಗೊಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ತ್ರಾಸಿ ಸಮೀಪದಲ್ಲಿರುವ ಸುಧಾಕರ್ ಶೆಟ್ಟಿ ಎಂಬವರ ಮಾಲಿಕತ್ವದ ಅಂಬಾ ಟಿವಿ ಸೆಂಟರ್ ನಲ್ಲಿ ಭಾನುವಾರ ಸಂಜೆ ಬೆಂಕಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿದ್ದು ಅದೃಷ್ಠವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ತಲುಪಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಷ್ಟದ ಅಂದಾಜು ಇನ್ನಷ್ಠೇ ತಿಳಿಯಬೇಕಾಗಿದ್ದು, ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.


Spread the love

Leave a Reply