ಗಂಗೊಳ್ಳಿ : ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Spread the love

ಗಂಗೊಳ್ಳಿ : ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಕುಂದಾಪುರ: ಗಂಗೊಳ್ಳಿ ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ.
ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಬೆಂಕಿ ಹೊತ್ತಿ ಉರಿದ ತಕ್ಷಣವೇ ಸ್ಥಳದಲ್ಲಿದ್ದ ಜನಾರ್ದನ್ ಖಾರ್ವಿ ಹಾಗೂ ಲಕ್ಷ್ಮಣ್ ಖಾರ್ವಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದರು. ಬೆಂಕಿತ ತೀವ್ರತೆ ಹೆಚ್ಚಿದ್ದರಿಂದಾಗಿ ಅವರಿಬ್ಬರಿಗೂ ಬೆಂಕಿ ತಗುಲಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಖಾರ್ವಿ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಗಂಗೊಳ್ಳಿಯ ಆಪತ್ಭಾಂದವ ಆಂಬುಲೆನ್ಸ್ ನ ಇಬ್ರಾಹಿಂ ಹಾಗೂ ತಂಡ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದರು.


Spread the love