ಗಂಗೊಳ್ಳಿ : ಮನೆ-ಮನೆಗೆ ತೆರಳಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Spread the love

ಗಂಗೊಳ್ಳಿ : ಮನೆ-ಮನೆಗೆ ತೆರಳಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪುರ: ದನದ ಮಾಂಸವನ್ನು ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗಂಗೊಳ್ಳಿ ಮೀನು ಮಾರ್ಕೆಟ್ ಸಮೀಪದ ನಿವಾಸಿ ಅಬ್ದುಲ್ ರಹೀಂ (30) ಎಂದು ಗುರುತಿಸಲಾಗಿದೆ.

ಆರೋಪಿ ಅಬ್ದುಲ್ ರಹೀಂ ಮನೆ-ಮನೆಗೆ ತೆರಳಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗಂಗೊಳ್ಳಿ ಠಾಣಾಧಿಕಾರಿ ಭೀಮಾ ಶಂಕರ ಸಿನ್ನೂರ ಸಂಗಣ್ಣ ನೇತೃತ್ವದ ತಂಡ ಬಂಧಿಸಿ, ಆತನಿಂದ 4 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ


Spread the love