
ಗಂಗೊಳ್ಳಿ: ಮಾರಿ ಜಾತ್ರೆಯ ಪ್ರಯುಕ್ತ ಫೆ 7 ರಂದು ಮದ್ಯ ಮಾರಾಟ ನಿಷೇಧ
ಕುಂದಾಪುರ: ಗಂಗೊಳ್ಳಿ ಗ್ರಾಮದ ಖಾರ್ವಿಕೇರಿಯ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದ ಮಾರಿ ಜಾತ್ರೆಯ ಪ್ರಯುಕ್ತ ಫೆಬ್ರವರಿ 7 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ರವರೆಗೆ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಮ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ನೀಡಿರುವ ವರದಿಯಂತೆ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿಯ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದ ಮಾರಿ ಜಾತ್ರೆ ಸಮಯದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ಫೆಬ್ರವರಿ 7 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಈ ಹಿನ್ನಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.