ಗಣರಾಜ್ಯೋತ್ಸವ ಪರೇಡ್‌ ಗೆ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಖಂಡನೆ

Spread the love

ಗಣರಾಜ್ಯೋತ್ಸವ ಪರೇಡ್‌ ಗೆ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಖಂಡನೆ

ಉಡುಪಿ: ಗಣರಾಜ್ಯೋತ್ಸವ ಪರೇಡ್ ಸಂದರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರವು ತಿರಸ್ಕರಿಸಿರುವುದನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ದೀಪಕ್‌ ಕೋಟ್ಯಾನ್‌ ಖಂಡಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳು ಮೇಲು ಕೀಳು ಎನ್ನುವ ಜಾತಿ ಭೇಧ ಹಾಗೂ ಮತ ದ್ವೇಷ ಇರುವ ಸಮಾಜದಲ್ಲಿ ಸರ್ವ ಸಮಾನತೆಯ ಜ್ಞಾನದ ಬೆಳಕಾಗಿ ಅವತರಿಸಿ ಒಂದೇ ಜಾತಿ ಒಂದೇಧರ್ಮ ಒಂದೇ ದೇವರು ಎನ್ನುವ ತತ್ವವನ್ನು ಜಗಕ್ಕೆ ಸಾರಿದ ಪರಮ ಗುರುಗಳು. ಕೋಟ್ಯಾಂತರ ಗುರುದೇವರ ಅನುಯಾಯಿಗಳ ಭಕ್ತಿ ಮತ್ತು ಭಾವನೆಗಳಿಗೆ ಅಗೌರವ ತೋರಿಸಿರುವುದು ವಿಷಾದನೀಯ ಕೇಂದ್ರ ಸರಕಾರವು ಈ ಬಗ್ಗೆ ಪುನರ್ಪರಿಶೀಲನೆ ಮಾಡಿ ಗುರುದೇವರ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಇರುವಂತೆ ಸೂಕ್ತ ಕ್ರಮಕೈಗೊಳ್ಳ ಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.


Spread the love

Leave a Reply