ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ ಯುವಕನ ದಾಂಧಲೆ! ಬಂಧನ

Spread the love

ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ ಯುವಕನ ದಾಂಧಲೆ! ಬಂಧನ

ಮಂಗಳೂರು: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.

ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬೂಬಕ್ಕರ್ ಸಿದ್ದೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ದೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ದೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.

ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ದೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬೂಬಕ್ಕರ್ ಸಿದ್ದೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


Spread the love