ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯ ಬಂಧನ

ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯ ಬಂಧನ

ಮಂಗಳೂರು: ನಗರದ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿರುವ ಶ್ರೀರಾಂ ಗ್ಯಾರೇಜ್ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ಮಂಗಳೂರು ನಗರದ ಪ್ರಮುಖ ಆರೋಪಿಯಾದ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಎಂಬಾತನಿಂದ 1 ಕೆ.ಜಿ 100 ಗ್ರಾಂ ತೂಕದ ಗಾಂಜಾ ಮತ್ತು ಕ್ರತ್ಯಕ್ಕೆ ಬಳಸಿದ ಆಕ್ಟಿವಾ ಹೋಂಡಾ , ಮೊಬೈಲ್ ಪೋನ್ ಹಾಗೂ ಡಿಜಿಟಲ್ ತೂಕ ಮಾಪನ ವನ್ನು ವಶಕ್ಕೆ ಪಡೆಯುವಲ್ಲಿ ಎಕನಾಮಿಕ್ &ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಆರೋಪಿತನ ವಿರುದ್ದ ಈಗಾಗಲೇ ಒಟ್ಟು 11 ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

ಈ ಪ್ರಕರಣದ ಕಾರ್ಯಾಚರಣೆಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಐ.ಪಿ.ಎಸ್. ಮಂಗಳೂರು ನಗರ. ಹಾಗೂ ಪೊಲೀಸ್ ಉಪ ಆಯುಕ್ತರುಗಳಾದ ಹನುಮಂತರಾಯ ಐ.ಪಿ.ಎಸ್. ಮತ್ತು ಲಕ್ಷ್ಮೀ ಗಣೇಶ್ ಇವರ ಮಾರ್ಗದರ್ಶನದಂತೆ ಮಂಗಳೂರು ನಗರದ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಮಕೃಷ್ಣ ಕೆ.ಕೆ , ಹಾಗೂ ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.