Home Mangalorean News Kannada News ಗಾಂಜಾ ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ

ಗಾಂಜಾ ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ

Spread the love

ಗಾಂಜಾ ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಥಮ ಪ್ರಕರಣದಲ್ಲಿ ಮಂಗಳೂರು ನಗರ ಪದವು ಗ್ರಾಮದ ಕುಲಶಖರ ಚೌಕಿ ಎಂಬಲ್ಲಿ ರಸ್ತೆಬದಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಜಿತಿನ್ (25) ತಂದೆ ಕುಲಶೇಖರ, ಪದವು ಗ್ರಾಮ, ಮಂಗಳೂರು , ಮೋಹಿತ್ ಕುಮಾರ್ (27) ಅಡ್ಯಾರ್ ಪದವು, ನೀರು ಮಾರ್ಗ, ಮಂಗಳೂರು , ಗುರುರಾಜ್ (25) ಮೂಡು ಶೆಡ್ಡೆ, ವಾಮಂಜೂರು ಮಂಗಳೂರು ಎಂಬವರುಗಳನ್ನು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ NDPS ಕಾಯ್ದೆಯಡಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪೊಲೀಸ್ ಆಯುಕ್ತರಾದ ಟಿ. ಆರ್. ಸುರೇಶ್, ಉಪ ಪೊಲೀಸ್ ಆಯುಕ್ತರಾದ ಹನುಮಂತರಾಯ ಹಾಗೂ ಉಮಾ ಪ್ರಶಾಂತ್ ಮತ್ತು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರಾಮರಾವ್ ರವರ ನಿರ್ದೇಶನದಂತೆ ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅಶೋಕ್ ರವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುತ್ತಾರೆ.

ಎರಡನೇ ಪ್ರಕರಣದಲ್ಲಿ ಮಂಗಳೂರು ನಗರ ಬರ್ಕೆ ಪೊಲೀಸ್ ಠಾಣಾ ಸರಹದ್ದಿನ ಡಯೆಟ್ ಕಾಲೇಜ್ ನ ಬಳಿ ಗಾಂಜಾ ಸೇವನೆ ಮಾಡಿದ್ದ ಶಿವಕುಮಾರ, 21 ವರ್ಷ ಶಕ್ತಿನಗರ ಮಂಗಳೂರು ಎಂಬವರನ್ನು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ NDPS ಕಾಯ್ದೆಯಡಿಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಪತ್ತೆ ಕಾರ್ಯದಲ್ಲಿ ಬರ್ಕೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಶೋಭಾ ರವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುತ್ತಾರೆ.


Spread the love

Exit mobile version