ಗುಂಡಿಬೈಲು ಪ್ರದೇಶದಲ್ಲಿ ಪ್ರಸಾದ್ ರಾಜ್ ಕಾಂಚನ್ ಮನೆ ಮನೆ ಪ್ರಚಾರ

Spread the love

ಗುಂಡಿಬೈಲು ಪ್ರದೇಶದಲ್ಲಿ ಪ್ರಸಾದ್ ರಾಜ್ ಕಾಂಚನ್ ಮನೆ ಮನೆ ಪ್ರಚಾರ

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಗುಂಡಿಬೈಲು ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಪ್ರಯುಕ್ತ ಮನೆ-ಮನೆಗೆ ಭೇಟಿ ನೀಡಿ ಪ್ರಚಾರಕಾರ್ಯದಲ್ಲಿ ಭಾಗವಹಿಸಿದರು.

ಗುಂಡಿಬೈಲು ವ್ಯಾಪ್ತಿಯ ನಾಗರಿಕರೋರ್ವರು ಮಾತನಾಡಿ, “ ಇಂದು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪ್ರಾಮಾಣಿಕ, ಸಜ್ಜನ ವ್ಯಕ್ತಿಯನ್ನು ಆರಿಸಲಾಗಿದೆ. ಬಿಜೆಪಿಯ ಬೆಲೆಏರಿಕೆ, ಲಂಚ, ಮಂಚ ಮುಂತಾದ ಹಗರಣಗಳು ಬಯಲಿಗೆ ಬಂದು ಬಿಜೆಪಿ ಸುಳ್ಳಿನ ಪಕ್ಷ ಎಂಬುವುದು ಜನರಿಗೆ ಗೊತ್ತಾಗಿದೆ. ಇನ್ನು ಬಿಜೆಪಿ ಅಧಿಕಾರಕ್ಕೆ ಬರಲೇ ಬಾರದು ಎಂದು ಜನರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿ ಭಾಗ್ಯ ನೀಡಿ ಜನರನ್ನು ಉದ್ಧಾರ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುವುದು ಎಲ್ಲರ ಅಭಿಪ್ರಾಯವಾಗಿದೆ.” ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಗುಂಡಿಬೈಲು ವಾರ್ಡ್ ಪ್ರಚಾರದ ಉಸ್ತುವಾರಿ ಆರ್.ಕೆ. ರಮೇಶ್ ಮೊದಲಾದವರು ಉಪಸ್ಥಿತರಿದ್ದರು.


Spread the love