ಗುಂಡೇಟಿಗೆ ಬಲಿಯಾದವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Spread the love

ಗುಂಡೇಟಿಗೆ ಬಲಿಯಾದವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭ ಗೋಲಿಬಾರ್‌ಗೆ ಬಲಿಯಾದ ಇಬ್ಬರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತ ಎರಡೂ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗೋಲಿಬಾರ್ ಕುರಿತಂತೆ ಗೃಹಸಚಿವರ ಜೊತೆ ಚರ್ಚಿಸಿ ತನಿಖೆಗೆ ಕ್ರಮ ಕೈಗೊಳ್ಳಲಾಗುವುದ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದೇವೇಳೆ ಸದ್ಯ ಮಂಗಳೂರು ಶಾಂತವಾಗಿದೆ. ಅಲ್ಲಿಗೆ ಸಿದ್ದರಾಮಯ್ಯ ಸೇರಿದಂತೆ ಯಾವುದೇ ನಾಯಕರ ಭೇಟಿಗೆ ಯಾವುದೇ ಅಭ್ಯಂತರವಿಲ್ಲ ಎಂದವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸಂಜೆ ನಡೆದ ಗೋಲಿಬಾರ್‌ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬವರು ಮೃತಪಟ್ಟಿದ್ದರು.


Spread the love