
Spread the love
ಗುಂಡ್ಲುಪೇಟೆ ಗಣಿಯಲ್ಲಿ ಗುಡ್ಡಕುಸಿತ: ಇಬ್ಬರು ಮೃತ್ಯು, ಹಲವು ಮಂದಿ ಕಾರ್ಮಿಕರಿಗೆ ಗಾಯ
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ಘಟನೆ ಸಂಭವಿಸಿದೆ. ಆರು ಟಿಪ್ಪರ್ ಗಳಿಗೆ ಹಾನಿಯಾಗಿದೆ.
ಗಣಿ ಕಾರ್ಮಿಕರು ಹಾಗೂ ಟಿಪ್ಪರ್ ಚಾಲಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ.
Spread the love