ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ

Spread the love

ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ

ಮಂಗಳೂರು: ಭಾನುವಾರ ಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. .

ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿ 16 ವರ್ಷದ ಬಾಲಕ ಸಫ್ವಾನ್, 10 ವರ್ಷದ ಬಾಲಕಿ ಸಹಾಲಾ ಭಾನುವಾರ ಮೃತಪಟ್ಟಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ ತಲಾ 5 ಲಕ್ಷ ರೂಗಳ ಪರಿಹಾರವನ್ನು ಘೋಷಣೆ ಮಾಡಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ವಿತರಣೆ ಮಾಡಲು ಸೂಚನೆ ನೀಡಿದ್ದರು

ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love