ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

Spread the love

ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ನವದುರ್ಗಾ ಎಂಬ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರು ಇದ್ದರು ಎನ್ನಲಾಗಿದೆ

ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love