ಗುರುವಾರದಿಂದ ನಂದಿನಿ ಹಾಲು, ಮೊಸರಿನ ದರ 2 ರೂ. ಏರಿಕೆ

Spread the love

ಗುರುವಾರದಿಂದ ನಂದಿನಿ ಹಾಲು, ಮೊಸರಿನ ದರ 2 ರೂ. ಏರಿಕೆ

ಬೆಂಗಳೂರು: ಕೆಎಂಎಫ್  ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಿದೆ. ಪ್ರತಿ ಲೀಟರ್​ ಹಾಲಿನ ಬೆಲೆ 2 ರೂ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ.

ಹಾಲಿನ ದರ ಸಂಬಂಧ ಕಳೆದ 15 ದಿನಗಳಿಂದ ಸರ್ಕಾರ ಹಾಗೂ ಕೆಎಂಎಫ್​ ಮಧ್ಯೆ ಹಗ್ಗಜಗ್ಗಾಟ ನಡೆದಿದೆ. ಮೊನ್ನೇ ಅಷ್ಟೇ ಕೆಎಂಎಫ್​ ಹಾಲಿನ ದರ ಹೆಚ್ಚಿಸಿತ್ತು. ಆದ್ರೆ, ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ತಡೆಹಿಡಿದಿದ್ದರು. ಆದ್ರೆ, ಇದೀಗ ಮತ್ತೆ ಕೆಎಂಎಫ್​ ಸಭೆ ಸೇರಿ ಅಂತಿಮವಾಗಿ ನಂದಿನಿ ಹಲು ಹಾಗೂ ಮೊಸರಿನ ದರ ಹೆಚ್ಚಿಸಿದೆ.

  • ನಂದಿನಿ ಟೋನ್ಡ್ ಹಾಲು ಲೀಟರ್ ಗೆ 37ರಿಂದ 39 ರೂಪಾಯಿಗೆ ಏರಿಕೆ
  •  ಹೋಮೋಜಿನೈಸ್ಡ್ ಟೋನ್ಡ್ ಹಾಲು 38ರಿಂದ 40 ರೂಪಾಯಿಗೆ ಹೆಚ್ಚಳ
  • ಹೋಮೋಜಿನೈಸ್ಡ್ ಹಸುವಿನ ಹಾಲು 42ರಿಂದ 44 ರೂಪಾಯಿಗೆ ಹೆಚ್ಚಳ
  • ಕೆಎಂಎಫ್ ನಂದಿನಿ ಸ್ಪೆಷಲ್ ಹಾಲು 43ರಿಂದ 45 ರೂಪಾಯಿಗೆ ಏರಿಕೆ
  • ಹೋಮೋಜಿನೈಸ್ಡೇ ಸ್ಟ್ಯಾಂಡರ್ಡ್ ಹಾಲು 44ರಿಂದ 46 ರೂಪಾಯಿಗೆ ಏರಿಕೆ
  • ನಂದಿನಿ ಸಮೃದ್ಧಿ ಹಾಲು 48ರಿಂದ 50 ರೂಪಾಯಿಗೆ ಏರಿಕೆ
  • ಸಂತೃಪ್ತಿ ಹೋಮೋಜಿನೈಸ್ಡ್ ಹಾಲು 50ರಿಂದ 52 ರೂಪಾಯಿಗೆ ಏರಿಕೆ
  • ಮೊಸರು ಒಂದು ಲೀಟರ್ ಗೆ 45ರಿಂದ 47 ರೂಪಾಯಿಗೆ ಏರಿಕೆ

Spread the love

Leave a Reply

Please enter your comment!
Please enter your name here