ಗೆಳತಿಯೊಂದಿಗೆ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ – ದೂರು ದಾಖಲು

Spread the love

ಗೆಳತಿಯೊಂದಿಗೆ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ – ದೂರು ದಾಖಲು

ಸುಳ್ಯ: ಕಾಲೇಜಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಇತರ ವಿದ್ಯಾರ್ಥಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ

ಮಹಮ್ಮದ್ ಸನೀಫ್ ಎಂಬವರು ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ,ಕಾಂ ಪದವಿಯನ್ನು ಓದುತ್ತಿದ್ದು,ಅದೇ ಕಾಲೇಜಿನ ವಿದ್ಯಾರ್ಥಿನಿ ಈತನ ಸ್ನೇಹಿತೆಯಾಗಿದ್ದು, ಅವಳ ಒಟ್ಟಿಗೆ ಮಾತನಾಡುವುದನ್ನು ಕೆಲವರಿಗೆ ಇಷ್ಟವಿಲ್ಲದ ಕಾರಣ ಈ ದಿನ ದಿನಾಂಕ 30.08.2022 ರಂದು 10:30 ಗಂಟೆಗೆ ಸನೀಫ್ ಕ್ಲಾಸ್ ರೂಂ ನಲ್ಲಿರುವಾಗ ಅದೇ ಕಾಲೇಜಿನಲ್ಲಿ ಓದುತ್ತಿದ್ದ ಅಂತಿಮ ವರ್ಷದ ಬಿಬಿಎ ವಿಧ್ಯಾರ್ಥಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಕ್ಲಾಸ್ ನಿಂದ ಸನೀಫ್ ಅವರಲ್ಲಿ ಮಾತನಾಡಲಿಕೆಯಿದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿ ಅಲ್ಲೇ ಇದ್ದ ಅದೇ ಕಾಲೇಜಿನ ಇತರ ವಿದ್ಯಾರ್ಥಿಗಳಾದ ಪ್ರಜ್ವಲ್, (ಅಂತಿಮ ವರ್ಷದ ಬಿಬಿಎ) ತನುಜ್ (ಅಂತಿಮ ವರ್ಷದ ಬಿಕಾಂ) ಅಕ್ಷಯ್ (ದ್ವಿತಿಯ ವರ್ಷದ ಬಿಕಾಂ) ಮೋಕ್ಷಿತ್ (ಅಂತಿಮ ವರ್ಷದ ಬಿಕಾಂ) ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಮತ್ತು ಇತರರು ಕಲರ್ ಪಟ್ಟಿ ಹಿಡಿದು ನೀನು ಪಲ್ಲವಿ ಒಟ್ಟಿಗೆ ಯಾಕೆ ಮಾತನಾಡುತ್ತಿಯಾ ಎಂದು ಹೇಳುತ್ತಾ, ಅವರ ಕೈಯಲ್ಲಿದ್ದ ದೊಣ್ಣೆಯಿಂದ ಸನೀಫ್ ಬೆನ್ನಿಗೆ ಹೊಡೆದು ನೆಲಕ್ಕೆ ದೂಡಿಹಾಕಿ ಕಾಲಿನಿಂದ ತುಳಿದು ಇನ್ನೂ ಮುಂದಕ್ಕೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love